Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:11 - ಕನ್ನಡ ಸತ್ಯವೇದವು C.L. Bible (BSI)

11 ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಹಾರುವ ಬಾಣಗಳ ಬೆಳಗಿಗೂ ನಿನ್ನ ವಿುಂಚುವ ಈಟಿಯ ಹೊಳಪಿಗೂ ಸೂರ್ಯಚಂದ್ರರು ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ಹೊಳೆಯುವ ನಿನ್ನ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಆ ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:11
11 ತಿಳಿವುಗಳ ಹೋಲಿಕೆ  

ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


ತೆಗೆದಿಟ್ಟೆ ಬಿಲ್ಲನು ತೋಳಿನಿಂದ ಹೊರಡಿಸಿದೆ ಬಾಣಗಳನು ಅದರಿಂದ ಸೀಳಿರುವೆ ಭೂಮಿಯನು ನದಿಗಳಿಂದ.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು