ಹಬಕ್ಕೂಕ 3:13 - ಕನ್ನಡ ಸತ್ಯವೇದವು C.L. Bible (BSI)13 ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ. ಅಧ್ಯಾಯವನ್ನು ನೋಡಿ |