Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:16 - ಕನ್ನಡ ಸತ್ಯವೇದವು C.L. Bible (BSI)

16 ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:16
29 ತಿಳಿವುಗಳ ಹೋಲಿಕೆ  

ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು