Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:18 - ಕನ್ನಡ ಸತ್ಯವೇದವು C.L. Bible (BSI)

18 ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:18
30 ತಿಳಿವುಗಳ ಹೋಲಿಕೆ  

ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು