Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:19 - ಕನ್ನಡ ಸತ್ಯವೇದವು C.L. Bible (BSI)

19 ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:19
25 ತಿಳಿವುಗಳ ಹೋಲಿಕೆ  

ನನಗಿತ್ತನಾತ ಹುಲ್ಲೆಯಂಥ ಮೊನೆಗಾಲು ಎನ್ನ ಬಿಗಿನಿಲ್ಲಿಸಿದ ಮಲೆಗಳ ಮೇಲೂ.


ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು