Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:2 - ಕನ್ನಡ ಸತ್ಯವೇದವು C.L. Bible (BSI)

2 ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:2
45 ತಿಳಿವುಗಳ ಹೋಲಿಕೆ  

ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II


ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು.


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು