Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:8 - ಕನ್ನಡ ಸತ್ಯವೇದವು C.L. Bible (BSI)

8 ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:8
24 ತಿಳಿವುಗಳ ಹೋಲಿಕೆ  

ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II


ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ಅಶ್ವಗಳನ್ನೇರಿ ನೀ ಸಮುದ್ರವನು ದಾಟಿದೆ ನೊರೆಗರೆಯುವ ಜಲರಾಶಿಯನು ಹಾದುಹೋದೆ.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು