ಹೋಶೇಯ 1:1 - ಕನ್ನಡ ಸತ್ಯವೇದವು C.L. Bible (BSI)1 ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು. ಅಧ್ಯಾಯವನ್ನು ನೋಡಿ |