Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:5 - ಕನ್ನಡ ಸತ್ಯವೇದವು C.L. Bible (BSI)

5 ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:5
9 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು