Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:7
26 ತಿಳಿವುಗಳ ಹೋಲಿಕೆ  

ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.


ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು