Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:9
5 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.


ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು