Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:1
24 ತಿಳಿವುಗಳ ಹೋಲಿಕೆ  

“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


(ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು