Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:11 - ಕನ್ನಡ ಸತ್ಯವೇದವು C.L. Bible (BSI)

11 “ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವದರಲ್ಲಿಯೇ ಇಷ್ಟಪಡುವ ಕಡಸಾಗಿದೆ; [ಈಗಲಾದರೋ] ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:11
13 ತಿಳಿವುಗಳ ಹೋಲಿಕೆ  

ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?


ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”


ಈಜಿಪ್ಟ್ ಅಂದವಾದ ಒಂದು ಕಡಸು ಅದಕ್ಕೆ ಹತ್ತಿಬಿಟ್ಟಿದೆ ಬಡಗಲಿಂದ ಬಂದ ಉಣ್ಣೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು