Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:13 - ಕನ್ನಡ ಸತ್ಯವೇದವು C.L. Bible (BSI)

13 ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ; ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ ನಿಮ್ಮ ಶೂರರ ಬಾಹುಳ್ಯದಲ್ಲಿಯೂ ಭರವಸವಿಟ್ಟದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:13
19 ತಿಳಿವುಗಳ ಹೋಲಿಕೆ  

ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಸಜ್ಜನರ ಊಟ ಫಲಹಾರ; ವಂಚಕರ ಆಹಾರ ಹಿಂಸಾಚಾರ.


ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು