Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:9 - ಕನ್ನಡ ಸತ್ಯವೇದವು C.L. Bible (BSI)

9 “ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:9
12 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಗಿಬ್ಯದಲ್ಲಿ ತುತೂರಿಯನ್ನು ಊದಿರಿ, ರಮಾದಲ್ಲಿ ಕೊಂಬನ್ನು ಮೊಳಗಿಸಿರಿ; ಬೇತಾವೆನಿನಲ್ಲಿ ಕಾಳಗದ ಕರೆನೀಡಿರಿ. ಬೆನ್ಯಾಮಿನೇ, ನಿನ್ನನ್ನು ಬೆನ್ನಟ್ಟಿಬರುತ್ತಿರುವವರನ್ನು ನೋಡು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು