Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:11 - ಕನ್ನಡ ಸತ್ಯವೇದವು C.L. Bible (BSI)

11 ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:11
17 ತಿಳಿವುಗಳ ಹೋಲಿಕೆ  

ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು