Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:12 - ಕನ್ನಡ ಸತ್ಯವೇದವು C.L. Bible (BSI)

12 “ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:12
20 ತಿಳಿವುಗಳ ಹೋಲಿಕೆ  

ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು