ಹೋಶೇಯ 11:3 - ಕನ್ನಡ ಸತ್ಯವೇದವು C.L. Bible (BSI)3 ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.