Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:4 - ಕನ್ನಡ ಸತ್ಯವೇದವು C.L. Bible (BSI)

4 ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು; ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ ಅವರಿಗೆ ತೀನಿಯನ್ನು ನಯದಿಂದ ಇಕ್ಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:4
14 ತಿಳಿವುಗಳ ಹೋಲಿಕೆ  

ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.


ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು