Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:6 - ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:6
25 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.


ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.


ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.


ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು