Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:11 - ಕನ್ನಡ ಸತ್ಯವೇದವು C.L. Bible (BSI)

11 ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:11
18 ತಿಳಿವುಗಳ ಹೋಲಿಕೆ  

“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ಗಿಲ್ಯಾದು ದುಷ್ಟಜನರಿಂದ ತುಂಬಿದೆ. ಅವರು ತುಳಿಯುವ ಹಾದಿಗಳಲ್ಲೆಲ್ಲ ರಕ್ತಕಲೆಗಳೇ.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು