Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:2
32 ತಿಳಿವುಗಳ ಹೋಲಿಕೆ  

“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?


ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II


ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.


ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು