Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:3 - ಕನ್ನಡ ಸತ್ಯವೇದವು C.L. Bible (BSI)

3 ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:3
14 ತಿಳಿವುಗಳ ಹೋಲಿಕೆ  

ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು