Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:8 - ಕನ್ನಡ ಸತ್ಯವೇದವು C.L. Bible (BSI)

8 ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:8
29 ತಿಳಿವುಗಳ ಹೋಲಿಕೆ  

ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು