ಹೋಶೇಯ 13:1 - ಕನ್ನಡ ಸತ್ಯವೇದವು C.L. Bible (BSI)1 ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು. ಅಧ್ಯಾಯವನ್ನು ನೋಡಿ |