Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:10 - ಕನ್ನಡ ಸತ್ಯವೇದವು C.L. Bible (BSI)

10 ‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ಆ ಪಾಲಕರು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:10
26 ತಿಳಿವುಗಳ ಹೋಲಿಕೆ  

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು