ಹೋಶೇಯ 13:11 - ಕನ್ನಡ ಸತ್ಯವೇದವು C.L. Bible (BSI)11 ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ತೆಗೆದುಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.