Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:2 - ಕನ್ನಡ ಸತ್ಯವೇದವು C.L. Bible (BSI)

2 ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:2
33 ತಿಳಿವುಗಳ ಹೋಲಿಕೆ  

ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


ಅದನ್ನು ಅಲಂಕರಿಸುತ್ತಾರೆ ಬೆಳ್ಳಿಬಂಗಾರಗಳಿಂದ ಅದು ಅಲುಗದ ಹಾಗೆ ಭದ್ರಪಡಿಸುತ್ತಾರೆ ಮೊಳೆಸುತ್ತಿಗೆಯಿಂದ


ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


“ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ವಿಗ್ರಹಾರಾಧಕರೆಲ್ಲರೂ ಆಶಾಭಂಗಪಡುವರು. ಅದನ್ನು ಕೆತ್ತಿದವರು ಕೇವಲ ಮನುಷ್ಯ ಮಾತ್ರರು. ಅವರೆಲ್ಲರು ಇಲ್ಲಿಗೆ ಕೂಡಿಬರಲಿ; ನಿಶ್ಚಯವಾಗಿ ಅವರು ಹೆದರಿ ಲಜ್ಜೆಪಡುವರು.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು