Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:3 - ಕನ್ನಡ ಸತ್ಯವೇದವು C.L. Bible (BSI)

3 ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ಅವರು ಪ್ರಾತಃಕಾಲದ ಮೋಡದ ಪ್ರಕಾರವಾಗಿಯೂ ಬೇಗನೆ ಮಾಯವಾಗುವ ಇಬ್ಬನಿಯಂತೆಯೂ ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ ಗವಾಕ್ಷದಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:3
11 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.


ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು