Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:4
14 ತಿಳಿವುಗಳ ಹೋಲಿಕೆ  

ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು