Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:5 - ಕನ್ನಡ ಸತ್ಯವೇದವು C.L. Bible (BSI)

5 ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಣ್ಯದಲ್ಲಿ, ಘೋರ ಮರುಭೂವಿುಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:5
16 ತಿಳಿವುಗಳ ಹೋಲಿಕೆ  

ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು