Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:2 - ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:2
39 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”


ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.


ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು