Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:3 - ಕನ್ನಡ ಸತ್ಯವೇದವು C.L. Bible (BSI)

3 ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:3
36 ತಿಳಿವುಗಳ ಹೋಲಿಕೆ  

ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II


ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು