Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:7 - ಕನ್ನಡ ಸತ್ಯವೇದವು C.L. Bible (BSI)

7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:7
17 ತಿಳಿವುಗಳ ಹೋಲಿಕೆ  

ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು