ಹೋಶೇಯ 14:8 - ಕನ್ನಡ ಸತ್ಯವೇದವು C.L. Bible (BSI)8 ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.” ಅಧ್ಯಾಯವನ್ನು ನೋಡಿ |