Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:9 - ಕನ್ನಡ ಸತ್ಯವೇದವು C.L. Bible (BSI)

9 ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:9
46 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು