Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:17 - ಕನ್ನಡ ಸತ್ಯವೇದವು C.L. Bible (BSI)

17 ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಎತ್ತದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:17
8 ತಿಳಿವುಗಳ ಹೋಲಿಕೆ  

“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು