Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:18 - ಕನ್ನಡ ಸತ್ಯವೇದವು C.L. Bible (BSI)

18 ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:18
27 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ.


ಕಾಡುಮೃಗಗಳು, ಸಾಕುಪ್ರಾಣಿಗಳು I ಕ್ರಿಮಿಕೀಟಗಳು, ಪ್ರಾಣಿಪಕ್ಷಿಗಳು II


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು