Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:2 - ಕನ್ನಡ ಸತ್ಯವೇದವು C.L. Bible (BSI)

2 ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:2
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಆಗ ನಾನು - ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ’ ಎಂದುಕೊಂಡೆ.


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ನಿಮ್ಮ ಸಹೋದರರನ್ನು ‘ನಮ್ಮವರೇ' ಎಂದೂ ನಿಮ್ಮ ಸಹೋದರಿಯರನ್ನು’ಪ್ರೀತಿಪಾತ್ರರೇ’ ಎಂದೂ ಸಂಬೋಧಿಸಿರಿ.


ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು