Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:21
15 ತಿಳಿವುಗಳ ಹೋಲಿಕೆ  

ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು