Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:3 - ಕನ್ನಡ ಸತ್ಯವೇದವು C.L. Bible (BSI)

3 ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:3
27 ತಿಳಿವುಗಳ ಹೋಲಿಕೆ  

ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು