Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:10 - ಕನ್ನಡ ಸತ್ಯವೇದವು C.L. Bible (BSI)

10 ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯೆಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:10
18 ತಿಳಿವುಗಳ ಹೋಲಿಕೆ  

ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು