Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:13
20 ತಿಳಿವುಗಳ ಹೋಲಿಕೆ  

ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.


ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.


ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು