Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:14 - ಕನ್ನಡ ಸತ್ಯವೇದವು C.L. Bible (BSI)

14 ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೂಳೆಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವದಿಲ್ಲ; ನೀವೇ ಸೂಳೆಯರನ್ನು ಕರಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:14
23 ತಿಳಿವುಗಳ ಹೋಲಿಕೆ  

ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?


ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು