Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:2 - ಕನ್ನಡ ಸತ್ಯವೇದವು C.L. Bible (BSI)

2 ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:2
42 ತಿಳಿವುಗಳ ಹೋಲಿಕೆ  

ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.


ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


:ಸತ್ಯಾನುಸಾರ ನ್ಯಾಯತೀರಿಸಿರಿ.


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!


“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ನೀವು ಮಿಚ್ಪದಲ್ಲಿ ಉರುಲಾಗಿದ್ದೀರಿ. ತಾಬೋರಿನಲ್ಲಿ ಬಲೆಯಾಗಿದ್ದೀರಿ. ಶಿಟ್ಟಿಮಿನಲ್ಲಿ ಆಳವಾದ ಕಂದಕವನ್ನು ತೋಡಿದ್ದೀರಿ. ನಿಮ್ಮ ವಿರುದ್ಧ ತೀರ್ಪುಬಂದಿದೆ. ನಿಮ್ಮೆಲ್ಲರನ್ನು ಶಿಕ್ಷಿಸುವೆನು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ಗಿಲ್ಯಾದು ದುಷ್ಟಜನರಿಂದ ತುಂಬಿದೆ. ಅವರು ತುಳಿಯುವ ಹಾದಿಗಳಲ್ಲೆಲ್ಲ ರಕ್ತಕಲೆಗಳೇ.


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು