Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:3 - ಕನ್ನಡ ಸತ್ಯವೇದವು C.L. Bible (BSI)

3 ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:3
17 ತಿಳಿವುಗಳ ಹೋಲಿಕೆ  

ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಕಣ್ಣೆತ್ತಿ ನೋಡಿದೆ, ಏನಾಶ್ಚರ್ಯ ! ಜನರೊಬ್ಬರೂ ಇಲ್ಲ, ಆಕಾಶದ ಪಕ್ಷಿಗಳೆಲ್ಲವೂ ಕಾಣೆಯಾಗಿದ್ದವು.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು