ಹೋಶೇಯ 5:1 - ಕನ್ನಡ ಸತ್ಯವೇದವು C.L. Bible (BSI)1 “ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.