Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:10 - ಕನ್ನಡ ಸತ್ಯವೇದವು C.L. Bible (BSI)

10 “ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:10
15 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


“ಅವರು, ‘ಮತ್ತೊಬ್ಬನ ಗಡಿಮೇರೆಯನ್ನು ಸರಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ನಿನ್ನ ಪೂರ್ವಜರು ಹಾಕಿರುವ ಎಲ್ಲೆ ಗುರುತನ್ನು, ಸ್ಥಳಾಂತರಿಸಬೇಡ ನೀನು.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ದಿನವೆಲ್ಲಾ ನನ್ನನು ಅವು ಸುತ್ತುಗಟ್ಟಿವೆ I ಪ್ರವಾಹದಂತೆ ಎನ್ನ ಮೇಲೆ ಹರಿಯುತ್ತಿವೆ II


ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು