Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:11 - ಕನ್ನಡ ಸತ್ಯವೇದವು C.L. Bible (BSI)

11 ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:11
7 ತಿಳಿವುಗಳ ಹೋಲಿಕೆ  

“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು