Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ಮಿಚ್ಪದಲ್ಲಿ ಉರುಲಾಗಿದ್ದೀರಿ. ತಾಬೋರಿನಲ್ಲಿ ಬಲೆಯಾಗಿದ್ದೀರಿ. ಶಿಟ್ಟಿಮಿನಲ್ಲಿ ಆಳವಾದ ಕಂದಕವನ್ನು ತೋಡಿದ್ದೀರಿ. ನಿಮ್ಮ ವಿರುದ್ಧ ತೀರ್ಪುಬಂದಿದೆ. ನಿಮ್ಮೆಲ್ಲರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಅನೇಕಾನೇಕ ಕೆಟ್ಟ ಸಂಗತಿಗಳನ್ನು ಮಾಡಿದ್ದೀರಿ. ಆದ್ದರಿಂದ ನಿಮ್ಮೆಲ್ಲರನ್ನು ನಾನು ಶಿಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:2
18 ತಿಳಿವುಗಳ ಹೋಲಿಕೆ  

“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು